ಮನೆಗಳ ತೆರವಿಗೆ ತಿಂಗಳ ಕಾಲಾವಕಾಶ

CTD 11 CHENNAKKI HONADA
Published on

ಚಿತ್ರದುರ್ಗ: ನಗರದ ಚನ್ನಕ್ಕಿ ಹೊಂಡದಲ್ಲಿರುವ ಮನೆಗಳ ತೆರವಿಗೆ ಒಂದು ತಿಂಗಳ ಕಾಲಾವಕಾಶ ನೀಡುವಂತೆ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ಮನೆಗಳ ತೆರವಿಗೆ ಆಗಮಿಸಿದ್ದ ಅಧಿಕಾರಿಗಳ ಬಳಿ ಅಲವತ್ತುಕೊಂಡ ಸ್ಥಳೀಯರು, ಹಲವು ವರ್ಷಗಳಿಂದ ನೂರಾರು ಬಡವರು ಇಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ನಗರಸಭೆ ಬೇರೆಡೆ ನಿವೇಶನ, ಮನೆ ಹೊಂದಿದ್ದಾರೆಂದು ಹೇಳಿ ಮನೆ ತೆರವುಗೊಳಿಸುವುದು ಸರಿಯಲ್ಲ ಎಂದು ಹೇಳಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ನಗರಸಭೆ ಸದಸ್ಯ ಪೊಲೀಸ್ ಮಲ್ಲಿಕಾರ್ಜನ್ ಹಾಗೂ ಸಮಿತಿ ಪ್ರಮುಖರು, ನಿವಾಸಿಗಳೊಂದಿಗೆ ಚರ್ಚಿಸಿದರು.

ತೆರವು ಕಾರ್ಯಚರಣೆ ಸ್ಥಗಿತಗೊಳಿಸಲು ಅಧಿಕಾರಿಗಳಿಗೆ ಮನವಿ ಮಾಡಿದರು. ಒಂದು ತಿಂಗಳ ಕಾಲಾವಕಾಶ ಕೊಡಿ, ಸೂರಿಲ್ಲದವರಿಗೆ ಸೂರು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಮಿತಿ ಅಧ್ಯಕ್ಷ ಎಚ್.ಎಚ್.ಮಂಜುನಾಥ್, ಉಪಾಧ್ಯಕ್ಷ ಡಿ.ವಿರುಪಾಕ್ಷಪ್ಪ, ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಪೂಜಾರು ಹನುಮಂತಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net