ಮೆರವಣಿಗೆಯಲ್ಲಿ ಪಾಲ್ಗೊಂಡು ತಪ್ಪು ಮಾಡಿದೆ

NARAYANA SWAMY MP
Published on

ಚಿತ್ರದುರ್ಗ: ಪರಶುರಾಮಪುರದಲ್ಲಿ ವೇದಾವತಿ ನದಿ ಪಾತ್ರದ ಬ್ಯಾರೇಜ್‌ಗೆ ಇತ್ತೀಚೆಗೆ ಬಾಗಿನ ಸಲ್ಲಿಸುವ ವೇಳೆ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡು ತಪ್ಪು ಮಾಡಿದೆ ಎನಿಸುತ್ತಿದೆ ಎಂದು ಸಂಸದ ಎ.ವೈ.ನಾರಾಯಣಸ್ವಾಮಿ ತಿಳಿಸಿದರು.

ಪತ್ರಿಕೆ ಜತೆ ಮಾತನಾಡಿ. ಅಂದು ಮೆರವಣಿಗೆಯಲ್ಲಿ ಭಾಗವಹಿಸುವ ಅಗತ್ಯ ಇರಲಿಲ್ಲ ಎಂದು ತಿಳಿಸಿದರು.

ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶರಣರ ಸಲಹೆ ಆಧರಿಸಿ ಜಿಲ್ಲೆಯ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ- ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವುದಾಗಿ ಇದೇ ವೇಳೆ ತಿಳಿಸಿದರು.

ಕೇಂದ್ರೀಯ ವಿದ್ಯಾಲಯ ಆರಂಭ ಕುರಿತು ಬೆಂಗಳೂರಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬುಧವಾರ ಮಾತನಾಡಬೇಕಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಾಧ್ಯವಾಗಿಲ್ಲ.

ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನ ಕಟ್ಟಡದ 12 ಕೊಠಡಿಗಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ಮೂರು ವರ್ಷ ಬಳಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಈ ಹಿಂದೆಯೇ ಒಪ್ಪಿದೆ ಎಂದರು.

ಅಜ್ಜಂಪುರ ಬಳಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ವೀಕ್ಷಣೆಗೆ ರೈಲ್ವೆ ಸಚಿವ ಸುರೇಶ್ ಅಂಗಡಿ ಜೂ.26ರಂದು ನೀಡಲಿದ್ದಾರೆ ಎಂದು ತಿಳಿಸಿದರು.

ನೂರು ಜನರಿದ್ದರೆ ಎಫ್‌ಐಆರ್: ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಪುತ್ರನ ವಿವಾಹ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘಿಸಲಾಗಿದೆ ಎಂದು ದೂರು ದಾಖಲಾದ ಬಗ್ಗೆ ಪ್ರತಿಕ್ರಿಯಿಸಿ ಲಾಕ್‌ಡೌನ್ ನಿಯಮಗಳಾನುಸಾರ ನೂರು ಜನರೊಳಗೆ ಇದ್ದರೆ ಎಫ್‌ಐಆರ್ ದಾಖಲಿಸಲು ಬರುವುದಿಲ್ಲ. ಈ ಸಂಬಂಧ ಎಸ್ಪಿ ಅವರೊಂದಿಗೆ ಮಾತನಾಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net