

ಚಿತ್ರದುರ್ಗ; ರಾಷ್ಟ್ರಿಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಜ.19-22ರ ವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ಐದು ವರ್ಷದೊಳಗಿನ 1,51,613 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಪೂರ್ವ ಸಿದ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಈ ಕುರಿತು ಮಾಹಿತಿ ನೀಡಿದರು.
ಗ್ರಾಮೀಣ ಪ ್ರದೇಶದ 1,17,699 ಹಾಗೂ ನಗರ ಪ್ರದೇಶದ 33,914 ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದ್ದು ಇದಕ್ಕಾಗಿ 1012 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
1145 ಲಸಿಕಾ ಕಾರ್ಯಕರ್ತರು, 185 ಮೇಲ್ವಿಚಾರಕರು ಇದರಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದರು.
ಜ.19ರಂದು ಲಸಿಕಾ ಕೇಂದ್ರಗಳಲ್ಲಿ ಜ.20, 22 ರಂದು ಮನೆ,ಮನೆಗೆ ಭೇಟಿ ನೀಡಿ ಬಾಕಿ ಉಳಿದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಾಗುವುದು.ಅಂಗನವಾಡಿ ಕಾರ್ಯಕರ್ತೆಯರು, ಸ್ವಯಂ ಸೇವಾಸಂಸ್ಥೆಗಳ ಸಹಕಾರ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ಮಾತನಾ ಡಿ ಲಸಿಕೆ ಕಾರ್ಯಕ್ರಮ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಡಂಗುರ ಸಾರಿಸಬೇಕು. ನಗರ, ಪಟ್ಟಣ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾತನಾಡಿ, ಲಸಿಕಾ ಕಾರ್ಯಕ ್ರಮದ ಯಶಸ್ವಿಗಾಗಿ ಡಿ. 23ರಂದು ಕಾರ್ಯಗಾರ ಏರ್ಪಡಿಸಿ ತರಬೇತಿ ನೀಡಲಾಗಿದೆ ಎಂದರು.
ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳಾದ ಡಾ. ರೇಣು ಪ್ರಸಾದ್, ಡಾ.ಚಂದ್ರಶೇಖರ ಕಂಬಾಳಿಮಠ, ಡಾ.ಸುಧಾ, ಡಾ.ಆನಂದಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಾನಾಯಕ್ ಇತರರಿದ್ದರು.