28ರಂದು ದುರ್ಗಕ್ಕೆ ಪ್ರಭಾಕರ ಭಟ್ ಕಲ್ಲಡ್ಕ

CTD 17 ABVP
Published on

ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜ.28ರ ಬೆಳಗ್ಗೆ 11.30ಕ್ಕೆ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ಚಿಂತನ ಕಾರ್ಯಕ್ರಮ ಆಯೋಜಿಸಿದೆ.

ಈ ವೇಳೆ ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಬೃಹತ್ ಶೋಭಾಯಾತ್ರೆ ಹಾಗೂ ಬಹಿರಂಗ ಸಭೆ ಏರ್ಪಡಿಸಲಾಗಿದೆ.

ಬಹಿರಂಗ ಸಭೆಗೂ ಮೊದಲು ನಗರದ ಚಳ್ಳಕೆರೆ ಗೇಟ್ ಹಾಗೂ ಕೋಟೆಯಿಂದ ಪ್ರತ್ಯೇಕವಾಗಿ ಆರಂಭವಾಗುವ ವಿದ್ಯಾರ್ಥಿಗಳ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳ ಮೂಲಕ ನಗರದ ಒನಕೆ ಓಬವ್ವ ವೃತ್ತದಲ್ಲಿ ಒಗ್ಗೂಡಿ ಹಳೇ ಮಾಧ್ಯಮಿಕ ಶಾಲಾ ಆವರಣ ಸೇರಲಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ.ಪ್ರಭಾಕರ್ ಕಲ್ಲಡ್ಕ ವಿಶೇಷ ಭಾಷಣ ಮಾಡಲಿದ್ದಾರೆ. ಬಿಜೆಪಿ ಶಾಸಕರು, ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಮುಖಂಡರು, ಸಂಘ ಪರಿವಾರದ ನಾನಾ ಪ್ರಮುಖರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net