ಕ್ರೀಡೆಯಿಂದ ಆತ್ಮಸ್ಥೈರ್ಯ ವೃದ್ಧಿ

CTD SOPRTS
Published on

ಚಿತ್ರದುರ್ಗ: ವಿದ್ಯಾರ್ಥಿಗಳು ಪಠ್ಯದ ಜತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಆತ್ಮಸ್ಥೈರ್ಯ ಹೆಚ್ಚುತ್ತದೆ. ದೈಹಿಕ ಮತ್ತು ಮಾನಸಿಕವಾಗಿ ಸಧೃಡರಾಗಿರುತ್ತಾರೆ ಎಂದು ವಕೀಲರ ಸಂಘದ ಅಧ್ಯಕ್ಷ ಎಸ್.ವಿಜಯಕುಮಾರ್ ಕುಂಚಿಗನಾಳ್ ಸಲಹೆ ನೀಡಿದರು.

ಸತ್ಯಮೇವ ಜಯತೆ ಯುವ ಶಕ್ತಿ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಕ್ರೀಡಾ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹೊಸ ವರ್ಷಾಚರಣೆ ಮತ್ತು ಕ್ರೀಡಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಯ, ವ್ಯಕ್ತಿ ಮತ್ತು ವಿಷಯ ಪ್ರಜ್ಞೆ ಬಗ್ಗೆ ಅರಿತುಕೊಳ್ಳಬೇಕು. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಖಚಿತ ಎಂದು ತಿಳಿಸಿದರು.

ಹಿರಿಯ ವಕೀಲ ಬಿ.ಕೆ.ರಹಮತ್‌ವುಲ್ಲಾ ಮಾತನಾಡಿ, ವಿದ್ಯಾರ್ಥಿಗಳು ದೇಶದ ಬೆನ್ನೆಲುಬು, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಹುಟ್ಟಿದ ಊರಿಗೆ ಕೀರ್ತಿ ತರಬೇಕು. ಶೈಕ್ಷಣಿಕ ಸಾಧನೆಯಲ್ಲೂ ಮುಂದಿರಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಅರವಿಂದ್, ಪ್ರವಿಣ್, ಪವನ್ ಕುಮಾರ್, ಸ್ವಾಮಿ, ಶಿಲ್ಪಾ, ಪೂಜಾ, ನೂತನ್ ಕುಮಾರ್, ಶಾನಿಯ ಅವರನ್ನು ಸನ್ಮಾನಿಸಲಾಯಿತು.

ಸತ್ಯಮೇವ ಜಯತೆ ಯುವ ಶಕ್ತಿ ಸಂಘ ರಾಜ್ಯಾಧ್ಯಕ್ಷ ಪ್ರತಾಪ್ ಜೋಗಿ, ಮಾತೃಶ್ರೀ ವಿದ್ಯಾಸಂಸ್ಥೆ ಅಧ್ಯಕ್ಷ ವಿ.ಎಲ್.ಪ್ರಶಾಂತ್, ವಕೀಲರಾದ ರಮೇಶ್, ಹರೀಶ್, ನರಸಿಂಹ, ಅಥ್ಲೆಟಿಕ್ ತರಬೇತುದಾರ ಮಹಾಬಲೇಶ್, ಮುಖಂಡ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net