ಆರೋಗ್ಯ ತಪಾಸಣೆ ಕಡ್ಡಾಯ

TALUKU OFFICE CHITRADURGA (2)
Published on

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನಲ್ಲಿರುವ 530 ಅಂಗನವಾಡಿ ಕೇಂದ್ರದ 31816 ಮಕ್ಕಳ ವೈದ್ಯಕೀಯ ತಪಾಸಣೆಯನ್ನು ಕಡ್ಡಾಯವಾಗಿ ನಡೆಸುವಂತೆ ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ ತಾಲೂಕು ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಹುಟ್ಟಿದ ಮಗುವಿನಿಂದ ಆರು ವರ್ಷದೊಳಗಿನ ಅಂಗನವಾಡಿಯ ಎಲ್ಲ ಮಕ್ಕಳ ಆರೋಗ್ಯವನ್ನು ತಪಾಸಣೆ ನಡೆಸಬೇಕು. ಕೋವಿಡ್-19 ಮುನ್ನೆಚ್ಚರಿಕೆಯಾಗಿ ಕೇಂದ್ರದ ಆದೇಶದಂತೆ ಪ್ರತಿಯೊಬ್ಬರು ಕೆಲಸ ಮಾಡಬೇಕಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆಯಾಗಬೇಕು. ತಾಲೂಕಿನಲ್ಲಿರುವ 25 ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸ್‌ಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ವೇಣುಗೋಪಾಲ್‌ಗೆ ಸೂಚಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ವೈದ್ಯಾಧಿಕಾರಿ, ದಾದಿಯರು, ನೇತ್ರ ಸಹಾಯಕರನ್ನೊಳಗೊಂಡ ಎರಡು ವೈದ್ಯಕೀಯ ತಂಡಗಳು ಅಂಗನವಾಡಿಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಿವೆ ಎಂದು ತಿಳಿಸಿದರು.

ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಜುಳಾ, ಸಮಾಜ ಕಲ್ಯಾಣ ಇಲಾಖೆ ಪರಮೇಶ್ವರಪ್ಪ, ವೈದ್ಯರಾದ ಡಾ.ವಾಣಿ, ಡಾ.ಮಂಜುಳಾ, ಡಾ.ಸುಪ್ರಿತಾ, ಡಾ.ಮಹೇಂದ್ರ, ಹಿರಿಯ ಆರೋಗ್ಯ ಸಹಾಯಕಿ ಪರ್ವಿನ್, ಆಶಾ ಬೋಧಕಿ ಶಭಾನಾ, ಹಿರಿಯ ಆರೋಗ್ಯ ಸಹಾಯಕ ಮಾರುತಿ ಪ್ರಸಾದ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net