ಕರೊನಾ ನಿಯಂತ್ರಣ ಸಮರ್ಥ

ASHOK R download
Published on

ಚಿತ್ರದುರ್ಗ: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ರಾಜ್ಯ ಸರ್ಕಾರಕ್ಕೆ ಉತ್ತಮ ಹೆಸರಿದೆ. ಇದನ್ನು ನೋಡಿ ಕಾಂಗ್ರೆಸ್ಸಿಗರು ಬ್ಯಾಡಗಿ ಮೆಣಸಿಕಾಯಿ ತಿಂದಂಗೇ ಆಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಆಶೋಕ್ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕರೊನಾ ನಿಯಂತ್ರಣಕ್ಕೆ ಕಂದಾಯ ಇಲಾಖೆಗೆ 280 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು.

ನಮ್ಮ ಅಧಿಕಾರಿಗಳು ಕ್ವಾರಂಟೈನ್ ವ್ಯವಸ್ಥೆಯನ್ನು ಚೆನ್ನಾಗಿಯೇ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲಿರುವವರು ಬಿರಿಯಾನಿ, ಬೀಡಿ ಕೇಳಿದರೆ ಕೊಡಲು ಆಗದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net