ಚಿತ್ರದುರ್ಗ ಜಿಲ್ಲೆಗಿಲ್ಲ ಮನ್ನಣೆ

THAJPEER
Published on

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿತ್ರದುರ್ಗ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಆರೋಪಿಸಿದರು.

ಜಿಲ್ಲೆಗೆ ಮಂಜೂರಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜ್, ಭದ್ರಾ ಮೇಲ್ದಂಡೆ ಹಾಗೂ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಯೋಜನೆಗಳ ತ್ವರಿತ ಅನುಷ್ಠಾನದ ಕುರಿತು ಸಿಎಂ ಬಜೆಟ್‌ನಲ್ಲಿ ಏನನ್ನೂ ಪ್ರಸ್ತಾಪಿಸಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಗೆ ಕೊಟ್ಟಂಥ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ್ದು, ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರಿಗೆ ಅಧಿಕಾರ ಮುಖ್ಯವಾಗಿದೆ ಹೊರತು ಅಭಿವೃದ್ಧಿ ಬೇಕಾಗಿಲ್ಲ ಎಂದು ದೂರಿದರು.

ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳಗು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಿಲ್ಲೆಗೆ ಅನುದಾನ ತರಲು ಇವರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕಾರ್ಯಾಧ್ಯಕ್ಷ ಸಿ.ಶಿವುಯಾದವ್, ಉಪಾಧ್ಯಕ್ಷರಾದ ಆರ್.ಕೆ.ನಾಯ್ಡು, ಮಹಮದ್ ಸಾಧಿಕ್ ವುಲ್ಲಾ, ಶಬ್ಬೀರ್ ಅಹಮದ್, ಮುಖಂಡರಾದ ಎನ್.ಡಿ.ಕುಮಾರ್, ಮೆಹಬೂಬ್ ಖಾತೂನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net