ಅಧಿನಾಯಕಿ ಇಡಿ ವಿಚಾರಣೆಗೆ ಕೈ ಕಿಡಿ; ಬಿಜೆಪಿಯಿಂದ ದ್ವೇಷದ ರಾಜಕಾರಣ-ಕಾಂಗ್ರೆಸ್ ಆಕ್ರೋಶ

chitradurga-challakere-protest-congress
Published on

ಚಿತ್ರದುರ್ಗ: ಕೋಟೆ ನಾಡಿನಲ್ಲಿ ಬುಧವಾರ ಪ್ರತಿಭಟನೆ ಕಾವೇರಿತ್ತು. ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಚಿತ್ರದುರ್ಗ, ಚಳ್ಳಕೆರೆಯಲ್ಲಿ ಬುಧವಾರ ಕಾಂಗ್ರೆಸ್ ಪ್ರಮುಖರು ಹೋರಾಟ ನಡೆಸಿದರು.

ಚಿತ್ರದುರ್ಗದಲ್ಲಿ ಮಾಜಿ ಸಚಿವರಾದ ಎಚ್.ಸಿ.ಮಹಾದೇವಪ್ಪ, ಎಚ್.ಆಂಜನೇಯ, ಕೆಪಿಸಿಸಿ ಪ್ರಮುಖರಾದ ಬಿ.ಎಲ್.ಶಂಕರ್, ರೇವಣ್ಣ, ಅಶೋಕ್ ಪಟ್ಟಣ್, ರಾಮಚಂದ್ರಪ್ಪ, ಪ್ರಕಾಶ್ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿನಾಕಾರಣ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋನಿಯಾ ಗಾಂಧಿ ಅವರನ್ನು ಮಂಗಳವಾರ 6 ತಾಸು ವಿಚಾರಣೆ ನಡೆಸಿದ್ದಾರೆ. ಹಾಗಿದ್ದರೂ ಮತ್ತೆ ಬುಧವಾರ ಸಹ ವಿಚಾರಣೆಗೆ ಒಳಪಡಿಸಿದೆ. ಸೋನಿಯಾಗಾಂಧಿ ಅವರಿಗೆ ಕೇಂದ್ರ ಸರ್ಕಾರ ಸಲ್ಲದ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಳ್ಳಕೆರೆಯಲ್ಲಿ ಧರಣಿ:

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಚಳ್ಳಕೆರೆ ನಗರದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದ ಬಳಿ ಕಾರ್ಯಕರ್ತರು ಧರಣಿ ನಡೆಸಿದರು. ಶಾಸಕ ಟಿ.ರಘುಮೂರ್ತಿ ಮಾತನಾಡಿ, ಆಡಳಿತ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹೋರಾಟ, ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಆದ್ದರಿಂದ ಮೌನ ಪ್ರತಿಭಟನೆ ಮೂಲಕ ನ್ಯಾಯ ಕೇಳುತ್ತಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net