ಸಿಎಎ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

CTD 02 CONG
Published on

ಚಿತ್ರದುರ್ಗ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಒನಕೆ ಓಬವ್ವ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸಮಿತಿ ಅಧ್ಯಕ್ಷ ಎಂ.ಡಿ.ಹಸನ್ ತಾಹೀರ್, ಜಿಲ್ಲಾಧ್ಯಕ್ಷ ಮಧುಪಾಲೇಗೌಡ, ಪ್ರಕಾಶ್, ಪ್ರಣವ್, ಶಿವರಾಜ್‌ರೆಡ್ಡಿ, ಸೈಯದ್ ಮೈನುದ್ದೀನ್, ಶೌಕತ್ ಪಾಶ, ಜಮೀರ್, ಮೊಹಮ್ಮದ್, ರವಿ, ಅಣ್ಣೇಶಿ, ಮನೋಹರ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net