ಭೋವಿ ಶಾಸಕರಿಗೆ ಮಂತ್ರಿ ಮಾಡಿ

CHANDRAPPA M
Published on

ಚಿತ್ರದುರ್ಗ: 2008ರಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರಲು ಭೋವಿ ಶಾಸಕರ ಕೊಡುಗೆ ಅಪಾರ. ಈ ಕಾರಣಕ್ಕೆ ಸಮುದಾಯದ ಒಬ್ಬರಿಗೆ ಮಂತ್ರಿಯನ್ನಾಗಿಸಬೇಕು ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಭಾರತದಲ್ಲಿ ಕಮಲ ಅರಳಲು ಸಮುದಾಯ ತ್ಯಾಗ ಮಾಡಿದೆ. ಹೀಗಿರುವಾಗಿ ಸಚಿವ ಸಂಪುಟದಲ್ಲಿ ಬೋವಿ ಸಮುದಾಯದ ಶಾಸಕರಿಗೆ ಆದ್ಯತೆ ನೀಡಬೇಕು ಎಂದರು.

ಪಕ್ಷೇತರರಾಗಿದ್ದ ಗೂಳಿಹಟ್ಟಿ ಶೇಖರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ನನ್ನ ಮಾತು ಕೇಳಿ ಬಿಜೆಪಿ ಬೆಂಬಲಿಸಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸಿದ ಬೋವಿ ಸಮುದಾಯಕ್ಕೆ ಬಿ.ಎಸ್.ಯಡಿಯೂರಪ್ಪ ಅನ್ಯಾಯ ಮಾಡೋದಿಲ್ಲ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net