ಕಾಂಗ್ರೆಸ್ ಕಾರ್ಯಕರ್ತರ ಸಭೆ

ASHOK NAIDU
Published on

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮೇ 31ರ ಬೆಳಗ್ಗೆ 11.30ಕ್ಕೆ ಕಾರ್ಯಕರ್ತರ ಸಭೆ ನಡೆಯಲಿದೆ.

ಯುವ ಜಿಲ್ಲಾಧ್ಯಕ್ಷ ಮಧು ಪಾಲೇಗೌಡ, ರಾಜ್ಯ ಉಪಾಧ್ಯಕ್ಷರಾದ ಭವ್ಯಾ, ಸುಮನಾ ಸೇರಿ ಜಿಲ್ಲಾ ಮಟ್ಟದ ನಾಯಕರು, ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ಬ್ಲಾಕ್ ಅಧ್ಯಕ್ಷ ಅಶೋಕ್ ನಾಯ್ಡು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net