ಕೋಟೆನಾಡು ಗಡಿಗಳೆಲ್ಲವೂ ಬಂದ್

DC VINOD PRIYA.1
Published on

ಚಿತ್ರದುರ್ಗ: ಕರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲೆಗೆ ಸಂಪರ್ಕಿಸುವ ಎಲ್ಲ ಜಿಲ್ಲಾ, ರಾಜ್ಯ ಮತ್ತು ಅಂತರ ರಾಜ್ಯ ಗಡಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಮುಚ್ಚಲು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಈ ಕ್ರಮ ಅನಿವಾರ್ಯವಾಗಿದೆ. ನಿತ್ಯ ಅಗತ್ಯದ ವಸ್ತುಗಳ ಸಾಗಾಣಿಕೆಗೆ ವಿನಾಯಿತಿ ನೀಡಿ, ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲ ಗಡಿಗಳನ್ನು ಮುಚ್ಚಲು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net