12 ಜನರ ವರದಿ ನೆಗೆಟಿವ್

DC VINOTH PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಪಡೆಯಲಾಗಿದ್ದ 12 ಜನರ ಗಂಟಲು ದ್ರವ ಮತ್ತು ರಕ್ತದ ವರದಿ ನೆಗಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಪ್ರಸ್ತುತ 62 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಬ್ಬರನ್ನು ಜಿಲ್ಲಾಸ್ಪತ್ರೆ ಪ್ರತ್ಯೇಕ ವಾರ್ಡ್‌ನಲ್ಲಿ ಮುಂದುವರಿಸಲಾಗಿದೆ.

ಶಂಕಾಸ್ಪದವೆಂದು ಪರಿಗಣಿಸಿದ್ದ 18 ಜನರ 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದ್ದು, ಅವರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಈವರೆಗೂ 31 ಜನರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 12 ಜನರ ಪರೀಕ್ಷಾ ವರದಿ ನೆಗಟಿವ್ ಇದ್ದು, ಜಿಲ್ಲೆಯಲ್ಲಿ ಈವರೆಗೂ ಸೋಂಕು ದೃಢಪಟ್ಟಿಲ್ಲವೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net