ರೋಗಗಳ ತಡೆಗೆ ಜನರ ಸಹಕಾರ ಅಗತ್ಯ

Dr. PALAKSHA
Published on

ಚಿತ್ರದುರ್ಗ: ಸೊಳ್ಳೆಗಳಿಂದ ಹರಡುವ ಡೆಂೆ ಮತ್ತು ಚಿಕೂನ್‌ಗುನ್ಯಾ ರೋಗಗಳ ಹಾವಳಿ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಇವುಗಳ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.

ಈ ವರ್ಷ ಏಪ್ರಿಲ್ ಅಂತ್ಯಕ್ಕೆ 124 ಡೆಂೆ, 54 ಚಿಕೂನ್‌ಗುನ್ಯಾ, 3 ಮಲೇರಿಯಾ ವರದಿಯಾಗಿದೆ. ಅದರಲ್ಲೂ ಚಿತ್ರದುರ್ಗ ತಾಲೂಕು ಒಂದರಲ್ಲೇ 91 ಡೆಂೆ, 42 ಚಿಕೂನ್‌ಗುನ್ಯಾ ಪ್ರಕರಣ ಪತ್ತೆಯಾಗಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಹಾವಳಿ ಕಂಡು ಬಂದಿದೆ. ಇದೀಗ ತಾನೆ ಮಳೆಗಾಲ ಆರಂಭವಾಗಲಿದ್ದು, ಈಗ ರೋಗ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದೆ. ಆದ್ದರಿಂದ ರೋಗಗಳು ಹರಡದಂತೆ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕಿದೆ.

ಸೊಳ್ಳೆಗಳಿಂದ ಡೆಂೆ ಹರಡುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣ.

ಖಾಲಿ ನಿವೇಶನಗಳಲ್ಲಿಯ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದೂ ಸೇರಿ ಹಲವು ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಡಿಎಚ್‌ಒ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net