ಅಲೆಮಾರಿಗಳಿಗೆ ಆಹಾರದ ಕಿಟ್ ವಿತರಿಸಿ

PRATHAP JOGI
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಹಿಂದುಳಿದ ಮತ್ತು ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಬಡವರನ್ನು ಸವರ್ಪಕವಾಗಿ ಗುರುತಿಸಿ ಆಹಾರದ ಕಿಟ್‌ಗಳನ್ನು ವಿತರಿಸುವಲ್ಲಿ ಜಿಲ್ಲಾಡಳಿತ ನಿರ್ಲಕ್ಷಿಸಿದೆ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಓ.ಪ್ರತಾಪ್ ಜೋಗಿ ದೂರಿದ್ದಾರೆ.

ಈ ಸಮುದಾಯಗಳ ಬಡವರಿಗೆ ಆಹಾರ್ ಕಿಟ್ ವಿತರಿಸುವಂತೆ ಕೋರಿ ಸಿಎಂ, ಸಮಾಜ ಕಲ್ಯಾಣ ಸಚಿವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಸೂಚಿಸಿದರೆ ಆಹಾರ ಕಿಟ್ ವಿತರಿಸುವುದಾಗಿ ನೋಡೆಲ್ ಅಧಿಕಾರಿ, ಎಸಿಎಫ್ ರಾಘವೇಂದ್ರ ತಿಳಿಸಿದ್ದು, ಡಿಸಿ ವಿನೋತ್ ಪ್ರಿಯಾ ಅವರು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾಂಸ್ಥಿಕ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲೆಯಲ್ಲಿ ಗುರುತಿಸಿರುವ ಸ್ಥಳಗಳು ಅವೈಜ್ಞಾನಿಕವಾಗಿದ್ದು, ಇವುಗಳನ್ನು ಮರು ಪರಿಶೀಲಿಸಬೇಕು ಹಾಗೂ ಕ್ವಾರಂಟೈನ್ ಆದವರಿಗೆ ಮೂಲ ಸೌಕರ್ಯಗಳನ್ನು ಸಮರ್ಪಕ ಒದಗಿಸಬೇಕೆಂದು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net