

ಚಿತ್ರದುರ್ಗ: ಜಿಲ್ಲೆಯ 15 ಹಾಸಿಗೆಗಳ 11 ಸಮುದಾಯ ಆರೋಗ್ಯ ಕೇಂದ್ರಗಳನ್ನು ಕೋವಿಡ್-19 ಹೆಲ್ತ್‌ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು.
ಹಿರಿಯೂರು ತಾಲೂಕು ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ವೇಳೆ ಮಾತನಾಡಿ, ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲೂ ಕೋವಿಡ್ ಆಸ್ಪತ್ರೆ ಸ್ಥಾಪನೆಗೆ ಪೂರ್ವ ಸಿದ್ಧತೆ ನಡೆದಿದೆ ಎಂದರು.
ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಡಾ.ಕಾಶಿ, ಆಡಳಿತ ವೈದ್ಯಾಧಿಕಾರಿ ಡಾ.ರವಿಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಜಾನಕಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಹನುಮಂತಪ್ಪ, ಆಸ್ಪತ್ರೆ ವೈದ್ಯರಾದ ಡಾ.ಶ್ರೀದೇವಿ ಮತ್ತಿತರರು ಇದ್ದರು.