

ಚಿತ್ರದುರ್ಗ: ಜಿಲ್ಲಾಡಳಿತದಿಂದ ನಗರದ ತರಾಸು ರಂಗಮಂದಿರದಲ್ಲಿ ಫೆ.15ರ ಮಧ್ಯಾಹ್ನ 12 ಗಂಟೆಗೆ ಸಂತ ಶ್ರೀ ಸೇವಾಲಾಲ್ ಜಯಂತಿ ಆಚರಿಸಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಸಂಸದ ಎ.ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷೆ ಜಿ.ಎಂ.ವಿಶಾಲಾಕ್ಷಿ ನಟರಾಜ್ ಪಾಲ್ಗೊಳ್ಳುವರು.
ಸಾಹಿತಿ, ಶಿಕ್ಷಕ ಕೆ.ಮಂಜುನಾಥ ನಾಯ್ಕ ಉಪನ್ಯಾಸ ನೀಡುವರು. ಸಿ.ರಂಗನಾಯ್ಕ ಮತ್ತು ಸಂಗಡಿಗರಿಂದ ಗೀತೆ ಗಾಯನ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ತರಾಸು ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ.