

ಚಿತ್ರದುರ್ಗ: ಲಾಕ್‌ಡೌನ್ ಸಂದರ್ಭದಲ್ಲಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಗಂಭೀರ ಪ್ರಯತ್ನಗಳನ್ನು ನಡೆಸುತ್ತಿಲ್ಲ ಎಂದು ಆರೋಪಿಸಿ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಲಾಕ್‌ಡೌನ್‌ನಿಂದ ರೈತರು ನಾನಾ ಕಷ್ಟಗಳಿಗೆ ಗುರಿಯಾಗಿದ್ದಾರೆ. ಹೂವು, ಹಣ್ಣು, ತರಕಾರಿ, ಈರುಳ್ಳಿ ಬೆಳೆಗಾರರ ಗೋಳು ಕೇಳುವವರು ಇಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡರು.
ಕೇಂದ್ರ, ರಾಜ್ಯ ಸರ್ಕಾರಗಳು ಕೂಡಲೇ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ಕೃಷಿ ಯಂತ್ರೋಪಕರಣಗಳ ದುರಸ್ತಿಗೂ ಸೂಕ್ತ ಅವಕಾಶ ಒದಗಿಸುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಆರ್.ವಿನೋತ್ ಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ತಾಲೂಕು ಅಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇದ್ದರು.