20ರಂದು ಕವಿ ಸರ್ವಜ್ಞ ಜಯಂತಿ

SARVAGNA download
Published on

ಚಿತ್ರದುರ್ಗ: ಜಿಲ್ಲಾಡಳಿತ ಫೆ.20 ರಂದು ಮಧ್ಯಾಹ್ನ 12 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಕವಿ ಸರ್ವಜ್ಞ ಜಯಂತಿಯನ್ನು ಆಯೋಜಿಸಿದೆ.

ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 10 ಗಂಟೆಗೆ ಹೊಳಲ್ಕೆರೆ ರಸ್ತೆ ಗೌರಸಂದ್ರ ಮಾರಮ್ಮ ದೇವಸ್ಥಾನದ ಆವರಣದಿಂದ ನಗರದಲ್ಲಿ ಮೆರವಣಿಗೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಕುಂಬಾರ ಸಂಘದ ಪ್ರಮುಖರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net