21,709 ಮಕ್ಕಳಿಗೆ ಪೋಲಿಯೊ ಲಸಿಕೆ

Dr. PALAKSHA
Published on

ಚಿತ್ರದುರ್ಗ: ಜಿಲ್ಲಾ ಆರೋಗ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಒಟ್ಟು 27029 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದು, ಕಳೆದ ಏಪ್ರಿಲ್‌ನಿಂದ ಈವರೆಗೆ 21,709 ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಶೇ.96 ಸಾಧನೆ ಮಾಡಿದೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹೊರತುಪಡಿಸಿ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮದಡಿ ಪೆಂಟಾವೆಲೆಂಟ್, ಬಿಸಿಜಿ, ದಡಾರ ಲಸಿಕೆಗಳನ್ನು ವಾರ್ಷಿಕ 27029 ಮಕ್ಕಳಿಗೆ ನೀಡುವ ಉದ್ದೇಶವಿದ್ದು, ಕಳೆದ ಏಪ್ರಿಲ್‌ನಿಂದ ಈವರೆಗೆ ಪೆಂಟಾವೆಲೆಂಟ್ ಲಸಿಕೆ-21,709, ಬಿಸಿಜಿ-18956 ಹಾಗೂ ದಡಾರ-20297 ಲಸಿಕೆಗಳನ್ನು ಮಕ್ಕಳಿಗೆ ಹಾಕುವ ಮೂಲಕ ಉತ್ತಮ ಸಾಧನೆ ಆಗಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net