246 ವರದಿ ಬಾಕಿ

Dr. PALAKSHA
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಶನಿವಾರ 31 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿಸಲಾಗಿದ್ದು, ಈವರೆಗೆ 246 ಜನರ ವರದಿ ಬರ ಬೇಕಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.

ಈವರೆಗೆ 3537 ಜನರ ಮಾದರಿ ಸಂಗ್ರಹಿಸಲಾಗಿದೆ. 3163 ಜನರ ವರದಿ ನೆಗೆಟೀವ್ ಬಂದಿದೆ. 40 ಜನರಲ್ಲಿ ಕೋವಿಡ್ ವೈರಸ್ ಸೋಂಕು ದೃಢಪಟ್ಟಿದ್ದು, ಈವರೆಗೆ 23 ಜನರು ಚೇತರಿಸಿಕೊಂಡಿದ್ದಾರೆ. 5034 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net