13ರಂದು ಕಾನೂನು ಅರಿವು-ನೆರವು

KANUNU hqdefault
Published on

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಯುವ ಹಾಗೂ ಸಂವಿಧಾನದ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜ.13ರ ಬೆಳಗ್ಗೆ 9.30ಕ್ಕೆ ಮೂಲ ಕರ್ತವ್ಯಗಳ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಿದೆ.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಶಿವಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಂಶುಪಾಲ ಜಿ.ಎಚ್.ಹೇಮಂತ್ ರಾಜು ಅಧ್ಯಕ್ಷತೆ ವಹಿಸುವರು.

ವಕೀಲರ ಸಂಘದ ಅಧ್ಯಕ್ಷ ಎಸ್.ವಿಜಯಕುಮಾರ್, ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಅನಿಲ್ ಕುಮಾರ್, ಉಪನ್ಯಾಸಕ ಕೆ.ಗೋಪಿ ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ.ಕೆ.ಕೆ.ಕಾಮಾನಿ ಹಾಗೂ ವಕೀಲ ಎಚ್.ಬಿ.ದೇವಿಪ್ರಸಾದ್ ಉಪನ್ಯಾಸ ನೀಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net