

ಚಿತ್ರದುರ್ಗ: ಜಿಲ್ಲೆಯಲ್ಲಿ ಶನಿವಾರ ಪರೀಕ್ಷೆಗೆ ಒಳಪಡಿಸಿದ 66 ಜನರ ಗಂಟಲು, ಮೂಗು ದ್ರವ ಮಾದರಿಯಲ್ಲಿ 63 ನೆಗೆಟಿವ್ ಬಂದಿದ್ದು, ಮೂರು ವರದಿ ತಿರಸ್ಕೃತಗೊಂಡಿವೆ. ಸದ್ಯ ಜಿಲ್ಲೆಯಲ್ಲಿ 2584 ಜನ ಹೋಂ ಕ್ವಾರಂಟೈನ್‌ನಲ್ಲಿದ್ದಾರೆಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 43ರಲ್ಲಿ ಎಲ್ಲರೂ ಚೇತರಿಸಿಕೊಂಡಿದ್ದಾರೆ. ಈವರೆಗೆ 4356 ಜನರ ಮಾದರಿ ಸಂಗ್ರಹಿಸಲಾಗಿದ್ದು, 4186 ಜನರ ವರದಿ ನೆಗೆಟಿವ್ ಬಂದಿದೆ, 129 ಮಾದರಿ ತಿರಸ್ಕೃತವಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.