ಸಾಂಕ್ರಾಮಿಕ ರೋಗ ತಪಾಸಣೆ ಶಿಬಿರ ಆಯೋಜಿಸಿ

ANANTH ZP HSD
Published on

ಚಿತ್ರದುರ್ಗ: ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಸಾಂಕ್ರಾಮಿಕ ರೋಗಗಳ ತಪಾಸಣೆ ಶಿಬಿರ ಆಯೋಜಿಸುವಂತೆ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಅನಂತ್ ಹೇಳಿದರು.

ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಆಯೋಜಿಸಿದ್ದ ಚಿತ್ರದುರ್ಗ ತಾಲೂಕಿನ 22 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಮೇಲ್ವಿಚಾರಕರ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ಮಾತನಾಡಿ, ಜ.19ರಿಂದ 22ರ ವರೆಗಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಆರೋಗ್ಯ ಮೇಲ್ವಿಚಾರಕ ಗಂಗಾಧರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net