ಪತ್ರಕರ್ತರಿಗೂ ವಿಮಾ ಸೌಲಭ್ಯ ಕಲ್ಪಿಸಿ

CTD 13 manavi
Published on

ಚಿತ್ರದುರ್ಗ: ಆರ್ಥಿಕ ದುಸ್ಥಿತಿಯ ಸಂದರ್ಭದಲ್ಲಿ ಜಾಹೀರಾತು ಬಾಕಿ ಮೊತ್ತ ಬಿಡುಗಡೆ ಸಹಿತ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪತ್ರಕರ್ತರು ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಸ್ಥಳೀಯ ಪತ್ರಿಕೆಗಳಿಗೂ ಕೋವಿಡ್-19 ಜಾಗೃತಿ ಜಾಹೀರಾತು ಕೊಡಬೇಕು ಹಾಗೂ ಪತ್ರಕರ್ತರಿಗೆ ವಿಮಾ ಸೌಲಭ್ಯ ವಿಸ್ತರಿಸುವಂತೆ ಒತ್ತಾಯಿಸಿದರು.

ಸ್ಥಳೀಯ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಶ.ಮಂಜುನಾಥ, ಪತ್ರಿಕಾ ಸಂಪಾದಕ-ವರದಿಗಾರರ ಸಂಘದ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಸಂಪಿಗೆ, ರಾಮು, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಲಕ್ಷ್ಮಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net