ಕಾರ್ಯಕರ್ತರಿಗೆ ಪರಿಷತ್ ಚುನಾವಣೆ ಪರೀಕ್ಷೆ: ಕೆ.ಎಸ್.ನವೀನ್

ಚಿತ್ರದುರ್ಗ, ಚುನಾವಣೆ, ಬಿಜೆಪಿ, ಆಗ್ನೇಯ ಪದವೀಧರ ಕ್ಷೇತ್ರ, Chitradurga, election, BJP, south east graduate constituency,
Published on

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ಪಕ್ಷದ ಕಾರ್ಯಕರ್ತರು ತಮ್ಮ ಶಕ್ತಿ, ಸಾಮರ್ಥ್ಯ ಸಾಬೀತು ಪಡಿಸಬೇಕಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಹೇಳಿದರು.

ಪಕ್ಷದ ಕಾರ್ಯಾಲಯದಲ್ಲಿ ನಗರ ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪದವೀಧರರ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಸರ್ಕಾರ ಶಿಕ್ಷಕರಿಗೆ, ನಿರುದ್ಯೋಗಿ ಪದವೀಧರರಿಗೆ ಏನೆಲ್ಲ ಕೊಡುಗೆ ಕೊಟ್ಟಿದೆ ಎಂದು ತಿಳಿಸಬೇಕು ಎಂದರು.

ಪ್ರಧಾನಿ ಮೋದಿ ಅವರು ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಶಿಕ್ಷಕರಿಗೆ 73 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ನಿರುದ್ಯೋಗಿ ಪದವೀಧರರು ಸ್ವಾವಲಂಬಿಯಾಗಿ ಜೀವಿಸಲು ಇರುವ ಅನುಕೂಲಗಳ ಬಗ್ಗೆ ತಿಳಿಸಲು ಸಲಹೆ ನೀಡಿದರು.

ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್ ಮಾತನಾಡಿ,ವಿಧಾನಸಭೆ, ಲೋಕಸಭೆ ಚುನಾವಣೆಗೂ ಈ ಚುನಾವಣೆಗೂ ವ್ಯತ್ಯಾಸವಿದೆ. ಹಾಗಾಗಿ ಪದವೀಧರರ ಮನೆ ಬಾಗಿಲಿಗೆ ಹೋಗಿ ಅಭ್ಯರ್ಥಿ ಪರ ಮತಯಾಚಿಸಬೇಕು ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ, ನಗರ ಮಂಡಲ ಅಧ್ಯಕ್ಷ ಜೆ.ಶಶಿಧರ್, ಪ್ರಮುಖರಾದ ಸುರೇಶ್ ಸಿದ್ದಾಪುರ, ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net