ಚಿತ್ರದುರ್ಗ: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಮಂಜುನಾಥ್ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಜಗದೀಶ್ ಗೌಡಪ್ಪ ಪಾಟೀಲ ತಿಳಿಸಿದ್ದಾರೆ.
ಅಧ್ಯಕ್ಷರಾಗಿದ್ದ ಕೆ.ಜಿ.ಜಗದೀಶ್ ವರ್ಗಾವಣೆಯಿಂದ ಸ್ಥಾನಕ್ಕೆ ಶನಿವಾರ ನಡೆದ ಉಪ ಚುನಾವಣೆಯಲ್ಲಿ 57 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಕೆ.ಮಂಜುನಾಥ್ 40, ಪ್ರತಿಸ್ಪರ್ಧಿ ಎಸ್.ಕೆ.ಮಂಜುನಾಥ್ 17 ಮತಗಳು ಪಡೆದರು.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎ.ಷಡಾಕ್ಷರಿ, ಖಜಾಂಚಿ ಶ್ರೀನಿವಾಸ್, ಗೌರವಾಧ್ಯಕ್ಷ ಶಿವರುದ್ರಯ್ಯ, ಉಪಾಧ್ಯಕ್ಷ ಬಸವರಾಜ್, ಬೆಂಗಳೂರು ವಿಭಾಗದ ಉಪಾಧ್ಯಕ್ಷ ಮೋಹನ್ ಕುಮಾರ್, ಹೊಸದುರ್ಗ ತಾಲೂಕು ಅಧ್ಯಕ್ಷ ಜಯಪ್ಪ, ಜಿಲ್ಲಾ ಶಾಖೆ ಪ್ರಭಾರಿ ಅಧ್ಯಕ್ಷ ಲೋಕೇಶ್ ಮತ್ತಿತರರು ಇದ್ದರು.