ನಾಕಾಬಂದಿ ಬಿಗಿಗೊಳಿಸಲು ಆಗ್ರಹ

Hanumante gwda BJP youth
Published on

ಚಿತ್ರದುರ್ಗ: ಹಸಿರು ವಲಯದಲ್ಲಿರುವ ಚಿತ್ರದುರ್ಗದಲ್ಲಿ ಕರೊನಾ ಸೋಂಕು ಪತ್ತೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗ ಳಲ್ಲಿ ನಾಕಾಬಂದಿಯನ್ನು ಬಿಗಿಗೊಳಿಸ ಬೇಕೆಂದು ಜಿಲ್ಲಾಡಳಿತವನ್ನು ಬಿಜೆಪಿ ಒತ್ತಾಯಿಸಿದೆ.

ಹೊರ ಜಿಲ್ಲೆ, ರಾಜ್ಯಗಳಿಂದ ಜಿಲ್ಲೆಗೆ ಬರುವ ಜನರನ್ನು ತಡೆಯಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ನಿಖರ ಮಾಹಿತಿ ಕೊಡಬೇಕೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತೇಗೌಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಪಾಸಿಟಿವ್‌ಪತ್ತೆ ಆಗಿರುವಂಥವರನ್ನು ನೇರ ಜಿಲ್ಲೆಗೆ ಸೇರಿಸದೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net