ಜನನ-ಮರಣ ನೋಂದಣಿ ತಿದ್ದುಪಡಿ ಪ್ರಕರಣ ಎಸಿ ಕೋರ್ಟ್‌ಗೆ; ವಕೀಲರ ವಿರೋಧ

Chitradurga, Hiriyur, Protest, Advocates Association
Published on

ಚಿತ್ರದುರ್ಗ: ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಇತ್ಯರ್ಥ ಪ್ರಕರಣಗಳನ್ನು ಉಪವಿಭಾಗಾಧಿಕಾರಿ ಕೋರ್ಟ್‌ಗೆ ವರ್ಗಾವಣೆ ಮಾಡಿ ಹೊರಡಿಸಿದ ದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸಿದರು.

ನಗರದ ಕೋರ್ಟ್ ಆವರಣದಿಂದ ಮೆರವಣಿಗೆ ನಡೆಸಿ ಅಂಬೇಡ್ಕರ್ ಪ್ರತಿಮೆ, ತಾಲೂಕು ಕಚೇರಿ ಮೂಲಕ ಸಾಗಿ ಒನಕೆ ಓಬವ್ವ ವೃತ್ತ ತಲುಪಿ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಜನನ-ಮರಣ ನೋಂದಣಿ ಪ್ರಕರಣಗಳ ಅಧಿಕಾರ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದಿಂದ ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ ವರ್ಗಾಯಿಸಿದ್ದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ. ಈ ತಿದ್ದುಪಡಿ ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿದ್ದು, ಸಾರ್ವಜನಿಕರ ಹಿತಾಸಕ್ತಿಗಾಗಿ ತಕ್ಷಣವೇ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹಿರಿಯೂರಿನಲ್ಲಿ: ಜನನ-ಮರಣ ನೋಂದಣಿ ಅಧಿಕಾರವನ್ನು ಉಪವಿಭಾಗಧಿಕಾರಿ ವ್ಯಾಪ್ತಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಹಿರಿಯೂರಿನಲ್ಲಿ ವಕೀಲರ ಸಂಘದವರು ತಹಸೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಅನಿಲ್‌ಕುಮಾರ್, ಸಂಜು, ಗುಂಡಪ್ಪ, ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net