ಮೂರು ತಾಲೂಕಲ್ಲಿ ಆರೋಗ್ಯ ಮೇಳ

CTD 7 CEO SABE
Published on

ಚಿತ್ರದುರ್ಗ: ಇಲಾಖೆ ಯೋಜನೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಮೇಳ ಆಯೋಜಿಸುವಂತೆ ಜಿಪಂ ಸಿಇಒ ಸಿ.ಸತ್ಯಭಾಮಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿ, ಎಸ್ಸಿ, ಎಸ್ಟಿ ಮತ್ತು ಬುಡಕಟ್ಟು ಸಮುದಾಯದ ಜನಸಂಖ್ಯೆ ಹೆಚ್ಚಿರುವ ಈ ಕ್ಷೇತ್ರಗಳಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕಿದೆ ಎಂದರು.

ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಡಿ.ಚಿದಾನಂದಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಮ್ಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ಭಾರತಿ ಬಣಕಾರ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಸ್.ಆನಂದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತಪ್ಪ ಪೂಜಾರ್, ಜಾನಕಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net