

ಚಿತ್ರದುರ್ಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಕನ್ನಡ ಭಾಷೆ ಕಡೆಗಣಿಸುತ್ತಿದೆ ಎಂದು ಆಪಾದಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ‌್ಯಕರ್ತರು ಬಿ.ಡಿ. ರಸ್ತೆಯ ಬ್ಯಾಂಕ್ ಶಾಖೆ ಎದುರು ಪ್ರತಿಭಟಿಸಿದರು.
ಪಾಸ್‌ಪುಸ್ತಕ, ಚಲನ್, ಚೆಕ್‌ಬುಕ್‌ಗಳಲ್ಲಿ ಕನ್ನಡ ಕಡೆಗಣಿಸಲಾಗಿದೆ. ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಜತೆ ಕನ್ನಡದಲ್ಲಿ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹದಿನೈದು ದಿನದೊಳಗೆ ಪಾಸ್‌ಪುಸ್ತಕ, ಚಲನ್, ಚೆಕ್‌ಪುಸ್ತಕಗಳನ್ನು ಕನ್ನಡದಲ್ಲಿ ಮುದ್ರಿಸದಿದ್ದರೆ ಬ್ಯಾಂಕ್‌ಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಬ್ಯಾಂಕಿನಲ್ಲಿ ಕನ್ನಡಕ್ಕೆ ಆದ್ಯತೆ ಕೊಡುವಂತೆ ಮುಖ್ಯವ್ಯವಸ್ಥಾಪಕ ಕೆ.ಸುರೇಶ್ ಅವರಿಗೆ ಮನವಿ ಸಲ್ಲಿಸಿದರು. ಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ತಿಪ್ಪೇಸ್ವಾಮಿ, ಎನ್.ಮಹೇಶ್, ಮಂಜುನಾಥ ಮತ್ತಿತರರು ಪ್ರತಿಭಟನೆಯಲ್ಲಿದ್ದರು.