ಗ್ರಾಪಂ ಸದಸ್ಯರ ಮುಂದುವರಿಸಿ

grama-panchayath-sathanur-ramanagara-government-organisations-pnsu0yhxdw
Published on

ಚಿತ್ರದುರ್ಗ: ಅಧಿಕಾರಾವಧಿ ಪೂರ್ಣಗೊಳಿಸುತ್ತಿರುವ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಅಧಿಕಾರವನ್ನು ಮುಂದಿನ ಚುನಾವಣೆವರೆಗೂ ಮುಂದುವರಿಸುವಂತೆ ಜಿಲ್ಲಾ ಗ್ರಾಪಂ ಸದಸ್ಯರ ಒಕ್ಕೂಟ ‘ಜನ ವಿಕಾಸ ಕರ್ನಾಟಕ ಸಂಘ’ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ರಾಜ್ಯ ಸರ್ಕಾರದ ಚಿಂತನೆ ಸರಿಯಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಎಚ್.ಸಿದ್ದಪ್ಪ, ಸಂಘಟನಾ ಕಾರ್ಯದರ್ಶಿ ಎನ್.ನಿಜಲಿಂಗಪ್ಪ ತಿಳಿಸಿದ್ದಾರೆ.

ಪ್ರಸ್ತುತ ದೇಶವನ್ನು ಕಾಡುತ್ತಿರುವ ಮಹಾಮಾರಿ ಕರೊನಾ ಸೋಂಕು ತಡೆ ನಿಟ್ಟಿನಲ್ಲಿ ಗ್ರಾಮೀಣ ಕಾರ್ಯಪಡೆಯಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಪ್ರತಿ ಹಳ್ಳಿಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸವನ್ನು ಗ್ರಾಪಂ ಪ್ರತಿನಿಧಿಗಳು ಮಾಡುತ್ತಿದ್ದಾರೆ. ಇಂಥ ಕಠಿಣ ಸನ್ನಿವೇಶದಲ್ಲಿ ಆಡಳಿತಾಧಿಕಾರಿಗಳ ನೇಮಕವಾದರೆ ಮೂಲ ಸೌಕರ್ಯ ಒದಗಿಸುವ ಕೆಲಸಕ್ಕೆ ತೊಡಕಾಗಲಿದೆ.

ಆದ್ದರಿಂದ ಚುನಾವಣೆ ಘೋಷಣೆ ಆಗುವವರೆಗೂ ಹಾಲಿ ಪ್ರತಿನಿಧಿಗಳನ್ನೇ ಅಧಿಕಾರದಲ್ಲಿ ಮುಂದುವರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net