ಯೋಗದಿಂದ ಮನಸ್ಸಿಗೆ ನೆಮ್ಮದಿ

CTD 24 YOGA (2)
Published on

ಚಿತ್ರದುರ್ಗ: ಜಂಜಾಟ ಬದುಕಿಗೆ ವಿದಾಯ, ಮನಸ್ಸಿಗೆ ನೆಮ್ಮದಿ ನೀಡುವ ಶಕ್ತಿ ಯೋಗಕ್ಕಿದೆ ಎಂದು ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹೇಳಿದರು.

ಭಾರತ ಸ್ವಾಭಿಮಾನ್ ಟ್ರಸ್ಟ್, ಜಿಲ್ಲಾ ಪತಂಜಲಿ ಯೋಗ ಸಮಿತಿ ಆಶ್ರಯದಲ್ಲಿ ನಗರದ ವೆಂಕಟರಮಣ ಸ್ವಾಮಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿರುವ ಯೋಗ, ಪ್ರಾಣಾಯಾಮ ತರಬೇತಿ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಯೋಗದಿಂದ ಮನಸು ಸಹಜ-ಶಾಂತ ಸ್ಥಿತಿಯಲ್ಲಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಕಾರ್ಯದೊತ್ತಡವಿದ್ದರೂ ನಿತ್ಯ ಒಂದು ಗಂಟೆ ಯೋಗಾಭ್ಯಾಸ ಮಾಡುತ್ತಾರೆ. ಇದು ನಮ್ಮೆಲ್ಲರಿಗೂ ಮಾದರಿ ಆಗಬೇಕು ಎಂದು ಹೇಳಿದರು.

ಚೇತನ ಪತಂಜಲಿ ಯೋಗ ಸಮಿತಿಯ ಲಲಿತಾ ಬೇದ್ರೆ, ಭಾಗ್ಯಾ, ಜಿಲ್ಲಾ ಯುವ ಭಾರತ್ ಸಂಘಟನೆ ಅಧ್ಯಕ್ಷ ನವೀನ್, ಯೋಗ ಸಮಿತಿಯ ಕಾರ್ಯಕರ್ತರಾದ ಎಲ್.ಎಸ್.ಬಸವರಾಜ್, ನಾಗರಾಜ್ ಸಂಗಂ, ಪ್ರಸನ್ನ ಭಾಗವಹಿಸಿದ್ದರು.

ರಾಧಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಯೋಗ ಗುರು ರವಿ ಕೆ.ಅಂಬೇಕರ್ ತರಬೇತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net