21ರಂದು ಕಾಯಕ ಶರಣರ ಜಯಂತಿ

ADC SANGAPPA (4)
Published on

ಚಿತ್ರದುರ್ಗ: ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯರ ಜಯಂತಿಯನ್ನು ಫೆ.21ರಂದು ಆಚರಿಸುವುದಾಗಿ ಎಡಿಸಿ ಸಿ.ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕಾಯಕ ಶರಣರ ಜಯಂತ್ಯುತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

21ರ ಬೆಳಗ್ಗೆ 9 ಗಂಟೆಗೆ ಒನಕೆ ಓಬವ್ವ ಕ್ರೀಡಾಂಗಣ ಬಳಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. 10.30ಕ್ಕೆ ಪತ್ರಿಕಾಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು.

ಡಾ.ಬಿ.ಎಂ.ಗುರುನಾಥ್, ಬಿ.ಆರ್.ಶಿವಕುಮಾರ್ ಕಾಯಕ ಶರಣರ ಕುರಿತು ಉಪನ್ಯಾಸ ನೀಡುವರು. ಅಂದು ಶಿವರಾತ್ರಿ ಹಬ್ಬದ ಅಂಗವಾಗಿ ರಜೆ ಇದ್ದರೂ ಎಲ್ಲ ಅಧಿಕಾರಿ, ಸಿಬ್ಬಂದಿ ಕಾಯಕ್ರಮದಲ್ಲಿ ತಪ್ಪದೆ ಭಾಗವಹಿಸಬೇಕೆಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಜಿಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಡಿ.ಎನ್.ಮೈಲಾರಪ್ಪ, ರಾಜಪ್ಪ, ಎಚ್.ಸಿ.ನಿರಂಜನಮೂರ್ತಿ, ಹನುಮಂತಪ್ಪ ದುರ್ಗಾ, ಸಿ.ಎಚ್.ಮಂಜುನಾಥ್, ಜಿಎನ್‌ಒ ಮೂರ್ತಿ ಮತ್ತಿತರ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net