ಶಿವಸೇನೆ ನಿಷೇಧಿಸಲು ಕರವೇ ಪ್ರತಿಭಟನೆ ಅಸ್ತ್ರ

CTD 31 KARNATAKA RAKSHANA VEDIKE
Published on

ಚಿತ್ರದುರ್ಗ: ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜ ಸುಟ್ಟು ಹಾಕಿದ ಶಿವಸೇನೆ ಮತ್ತು ಎಂಇಎಸ್ ಸಂಘಟನೆ ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡುವುದು, ಪದೇ ಪದೇ ಕನ್ನಡದ ನಾಮಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಗಡಿನಾಡು ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಆರ್.ವಿನೋತ್‌ಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಸಿ.ಓಬಳೇಶ್ ಯಾದವ್, ನಾಗರಾಜ್, ಬಸವರಾಜ್, ಸತೀಶ್, ಬಸವರಾಜಪ್ಪ, ಮಹಾಲಿಂಗಪ್ಪ, ಕೃಷ್ಣಮೂರ್ತಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net