ಹಿಂದುಳಿದ ಜಾತಿ ಸಂಘಗಳ ಸಭೆ

GODE THIPPESWAMY
Published on

ಚಿತ್ರದುರ್ಗ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾ ಶಾಖೆ ಉದ್ಘಾಟನೆ ಸಮಾರಂಭ ಅವಳಿ ಜಿಲ್ಲೆ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಫೆ.16ರಂದು ಆಯೋಜಿಸಲಾಗಿದೆ ಎಂದು ರಾಜ್ಯ ಸಮಿತಿ ಸದಸ್ಯ ಗೋಡೆ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಬೆಳಗ್ಗೆ 11 ಗಂಟೆಗೆ ರಂಗಯ್ಯನ ಬಾಗಿಲು ಸಮೀಪದ ಕುರುಬ ವಿದ್ಯಾರ್ಥಿ ನಿಲಯದಲ್ಲಿ, ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಬೀರಲಿಂಗೇಶ್ವರ ವಿದ್ಯಾರ್ಥಿ ನಿಲಯದಲ್ಲಿ ಕರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net