ನಾಳೆ ಜನತಾ ಕರ್ಪೂ

SP RADHIKA G sp
Published on

ಚಿತ್ರದುರ್ಗ: ಕೋವಿಡ್-19 ಸೋಂಕು ತಡೆ ನಿಟ್ಟಿನಲ್ಲಿ ವಿಧಿಸಿರುವ ಲಾಕ್‌ಡೌನ್ ಮೇ 31ರ ವರೆಗೆ ಮುಂದುವರಿಯಲಿದೆ. ಆದ್ದರಿಂದ ನಿತ್ಯವೂ ಜಿಲ್ಲಾದ್ಯಂತ ರಾತ್ರಿ 7ರಿಂದ ಬೆಳಗ್ಗೆ 7ರ ವರೆಗೆ ಕರ್ಪ್ಯೂ ಜಾರಿಯಲ್ಲಿರುತ್ತದೆ.

ಇದರೊಂದಿಗೆ ರಾಜ್ಯ ಸರ್ಕಾರದ ಆದೇಶದಂತೆ ಮೇ 24 ರಂದು ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಜನತಾಕರ್ಪ್ಯೂ ಜಾರಿಯಲ್ಲಿರುತ್ತದೆ. ಅಂದು ಈ ಅವಧಿಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಹಾಗೂ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ, ಅಂದು ಜನರು ಮನೆಯಿಂದ ಹೊರ ಬರಬಾರದೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net