ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

CTD 03 KATTADA KARMIKA
Published on

ಚಿತ್ರದುರ್ಗ: ಕಾರ್ಮಿಕ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರದ ಸಾಮಾಜಿಕ ಭದ್ರತಾ ಹಾಗೂ ಕಲ್ಯಾಣ ಸಂಕೇತ ಮತ್ತು ಔದ್ಯೋಗಿಕ ಆರೋಗ್ಯ ಮತ್ತು ಸಂರಕ್ಷಣಾ ಕರಡು ಸಂಕೇತಗಳನ್ನು ತಕ್ಷಣವೇ ವಜಾಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಶೇ.3 ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಹಣ ಒದಗಿಸಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರ ನೋಂದಣಿ, ನವೀಕರಣ ಹಾಗೂ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಕಾರ್ಮಿಕರ ಸಂಘಗಳ ಪಾತ್ರ ಈಗಿನಂತೆ ಮುಂದುವರಿಯುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ವೈ.ಸತ್ಯಪ್ಪ, ಮುಖಂಡರಾದ ಗಣೇಶ್, ಎಚ್.ಸಿ.ಮಚ್ಚೇಂದ್ರಪ್ಪ, ಮಲ್ಲೇಶ್, ಚಿತ್ರಲಿಂಗಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net