

ಚಿತ್ರದುರ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಗೃಹ ಬಳಕೆ ವಿದ್ಯುತ್ ಬಿಲ್, ಬ್ಯಾಂಕ್ ಸಾಲದ 5 ಲಕ್ಷ ರೂ. ಒಳಗಿನ ಸಾಲದ ಮೇಲಿನ 6ತಿಂಗಳ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಸಂಕಷ್ಟದ ಈ ಸಂದರ್ಭದಲ್ಲಿ ಘೋಷಿಸಿರುವ ವಿಶೇಷ ಪ್ಯಾಕೇಜ್‌ನ್ನು ಇನ್ನುಳಿದ ಹಲವು ವರ್ಗದ ಬಡವರಿಗೂ ವಿಸ್ತರಿಸಬೇಕೆಂದು ಕೆಪಿಸಿಸಿ ಮಾಧ್ಯಮ ವಕ್ತಾರ ಜಿ.ಬಿ.ಬಾಲಕೃಷ್ಣ ಸ್ವಾಮಿ ಯಾದವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.