

ಚಿತ್ರದುರ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 416 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 14228 ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡುವಂತೆ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ರಾಮನಾಯ್ಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
2019 ಡಿ.4ರ ವರೆಗೆ ಗೌರವಧನ ನೀಡಲಾಗಿದೆ. ನಂತರದಲ್ಲಿ ಈ ವರೆಗಿನ ಗೌರವಧನ ಬಾಕಿ 53 ಕೋಟಿ ರೂ. ಬಿಡುಗಡೆ ಆಗಬೇಕಿದೆ. ವೇತನಕ್ಕಾಗಿ ಉನ್ನತ ಶಿಕ್ಷಣ ಇಲಾಖೆಗೂ ಮನವಿ ಸಲ್ಲಿಸಲಾಗಿದೆ. ಸದ್ಯಕ್ಕೆ ಸರ್ಕಾರ ಬಿಡುಗಡೆ ಮಾಡಿರುವ 9.32 ಕೋಟಿ ರೂ. ಗಳಿಂದ ಉಪನ್ಯಾಸಕರಿಗೆ ಕೇವಲ 18 ದಿನಗಳ ಗೌರವಧನ ಸಿಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.