ಸರ್ಕಾರಿ ವಾಹನ ದುರ್ಬಳಕೆಗೆ ಡಿಸಿ ಗರಂ

DC VINOD PRIYA (1)
Published on

ಚಿತ್ರದುರ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯ ಹಾಗೂ ವೈಯಕ್ತಿಕ ಕಾರಣಗಳಿಗೆ ಸರ್ಕಾರಿ ವಾಹನಗಳನ್ನು ಬಳಸಿ ಸಂಚರಿಸುತ್ತಿರುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವು ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರೊನಾ ಸೋಂಕು ತಡೆಗಾಗಿ ಸಾರ್ವಜನಿಕ ಓಡಾಟ ನಿರ್ಬಂಧಿಸಲಾಗಿದೆ. ಇಂಥ ಹೊತ್ತಿನಲ್ಲಿ ಕೇಂದ್ರಸ್ಥಾನದಲ್ಲಿರದೆ ಅನಗತ್ಯವಾಗಿ ಸರ್ಕಾರಿ ವಾಹನಗಳ ದುರ್ಬಳಕೆ ಕಂಡು ಬಂದಿದ್ದು, ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net