

ಚಿತ್ರದುರ್ಗ: ಲಾಕ್‌ಡೌನ್‌ನಿಂದಾಗಿ ಹಣ್ಣು ಮತ್ತು ತರಕಾರಿ ಮಾರಾಟವಾಗದೆ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಒಂದು ಹೆ.ಗೆ ಗರಿಷ್ಠ 15,000 ರೂ. ಮೀರದಂತೆ ಹಾಗೂ ಕನಿಷ್ಠ 2000 ರೂ. ಪರಿಹಾರ ವಿತರಿಸುವ ಯೋಜನೆಗೆ ಜೂ.15ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಬಾಳೆ, ಪಪ್ಪಾಯ, ಅಂಜೂರ, ಟೊಮೆಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದಕುಂಬಳ, ಕ್ಯಾರೇಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ ಬೆಳೆ ನಷ್ಟಕ್ಕೆ ಪರಿಹಾರ ಘೋಷಿಸಲಾಗಿದೆ.
2019-2020 ಸಾಲಿನ ಹಿಂಗಾರು, ಮುಂಗಾರು ಬೆಳೆ ಸಮೀಕ್ಷೆ ವರದಿಯಂತೆ ನಷ್ಟ ಅನುಭವಿಸಿದ ಬೆಳೆಗಾರರಿಗೆ ಪರಿಹಾರ ವಿತರಿಸಲಾಗುವುದು. ಬೇಸಿಗೆ ಬೆಳೆ ಕಲ್ಲಂಗಡಿ, ಕರಬೂಜ ಸಮೀಕ್ಷೆಯಲ್ಲಿ ನಮೂದಾಗಿಲ್ಲದಿದ್ದರೂ ಅಂತಹ ರೈತರು ಅರ್ಜಿ ಸಲ್ಲಿಸ ಬಹುದು.
ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ (08194-230141) ಅಥವಾ ಆಯಾ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವಂತೆ ಇಲಾಖೆ ಉಪ ನಿರ್ದೇಶಕಿ ಜಿ.ಸವಿತಾ ತಿಳಿಸಿದ್ದಾರೆ.