ಸಾಮಾಜಿಕ ಅಂತರದಿಂದ ಕರೊನಾ ದೂರ

MLK KIT 10
Published on

ಮೊಳಕಾಲ್ಮೂರು: ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮನೆಯಲ್ಲಿಯೇ ಇರುವುದರಿಂದ ಮಹಾಮಾರಿ ಕರೊನಾ ವೈರಸ್ ನಿಯಂತ್ರಿಸಲು ಸಾಧ್ಯ ಎಂದು ಕಾಂಗ್ರೆಸ್ ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಮಾರ್ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಬಡಾವಣೆ 50 ಬಡ ಕುಟುಂಬಗಳಿಗೆ ಗೆಳೆಯರ ಬಳಗದಿಂದ 10 ಕೆಜಿ ದಿನಸಿ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದರು.

ಕರೊನಾ ವೈರಸ್ ಅಂಟು ರೋಗವಾಗಿದ್ದು, ಪರಸ್ಪರ ಅಂತರ ಕಾಯ್ದುಕೊಳ್ಳದಿದ್ದರೆ ಅಪಾಯ ಖಚಿತ. ಈ ಬಗ್ಗೆ ಎಚ್ಚರ ವಹಿಸಬೇಕು. ಆಗಾಗ ಸೋಪಿನಿಂದ ಕೈ ತೊಳೆದುಕೊಳ್ಳಬೇಕು. ಶುದ್ಧ ಹಾಗೂ ಬಿಸಿ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

ಲಾಕ್‌ಡೌನ್‌ನಿಂದ ಬಹಳಷ್ಟು ಬಡ ಜನತೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಉಳ್ಳವರು ಕೈಲಾದ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಶ್ರೀನಿವಾಸಲು, ನರಸಿಂಹಪ್ಪ, ನಾಗರಾಜ್, ತಿಪ್ಪೇಸ್ವಾಮಿ, ನರೇಶ್, ಪೊಲೀಸರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net