ಅವಶ್ಯಕ ವಸ್ತುಗಳ ಪೂರೈಕೆ

DC VINOTH PRIYA
Published on

ಚಿತ್ರದುರ್ಗ: ಲಾಕ್‌ಡೌನ್ ಹಿನ್ನೆಲೆ ವಲಸೆ ಕಾರ್ಮಿಕರು, ನಿರ್ಗತಿಕರು ಮತ್ತು ಅಲೆಮಾರಿ ಮೊದಲಾದ ವರ್ಗದವರಿಗೆ ನಿತ್ಯದ ಜೀವನ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅವಶ್ಯಕ ವಸ್ತುಗಳನ್ನು ಪೂರೈಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಆದ್ದರಿಂದ ಸ್ವಯಂ ಸೇವಕ ಸಂಘಗಳು, ದಾನಿಗಳು ಆಹಾರ ಸಾಮಗ್ರಿ, ಸಿದ್ದ ಆಹಾರ ಸಹಿತ ನಿತ್ಯೋಪಯೋಗಿ ವಸ್ತುಗಳನ್ನು ನೇರ ವಿತರಿಸದೆ ಕಡ್ಡಾಯವಾಗಿ ಜಿಲ್ಲಾಡಳಿತ ನೇಮಿಸಲಾಗಿರುವ ತಂಡಗಳಿಗೆ ತಲುಪಿಸಬೇಕು. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಚಿತ್ರದುರ್ಗ ನಗರ ಮತ್ತು ತಾಲೂಕಿಗೆ-ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕೆ.ಪಿ.ಮಧುಸೂಧನ್-(9448233477), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರರಾವ್ (9620089272), ಬಿಸಿಎಂ ಜಿಲ್ಲಾ ಅಧಿಕಾರಿ ಆರ್.ಅವಿನ್ (9886907455) ಹಾಗೂ ಜಿಲ್ಲೆಯ ಇತರೆ ತಾಲೂಕಿನವರು ಸಂಬಂಧಿಸಿದ ತಹಸೀಲ್ದಾರ್ ಅವರನ್ನು ಸಂಪರ್ಕಿಸಬಹುದೆಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net