ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಹೊಣೆ

SP RADHIKA
Published on

ಚಿತ್ರದುರ್ಗ: ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿ ಕಡ್ಡಾಯ ಪಾಲಿಸುವಂತೆ ಎಸ್ಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮನವಿ ಮಾಡಿದರು.

ಆರೋಗ್ಯ ಇಲಾಖೆ ಹಾಗೂ ಸಾರಿಗೆ ಇಲಾಖೆ ಆಶ್ರಯದಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು.

ಕರೊನಾ ಸೋಂಕು ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿದ್ದು, ಹೊರ ದೇಶ, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಚಿತ್ರದುರ್ಗಕ್ಕೆ ಬಂದಂಥವರ ಕ್ವಾರೆಂಟೈನ್‌ಗೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಕಾರ್ಯವನ್ನು ಶ್ಲಾಘಿಸಿದರು.

ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ, ಸಾರಿಗೆ ನಿಯಂತ್ರಣಾಧಿಕಾರಿ ಚನ್ನಬಸಪ್ಪ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಡಿ.ಚಿದಾನಂದಪ್ಪ, ಕೀಟಜನ್ಯ ಶಾಸ್ತ್ರಜ್ಞೆ ನಂದಿನಿಕಡಿ, ಟಿಎಚ್‌ಒ ಡಾ.ಬಿ.ವಿ ಗಿರೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net