ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

CTD 24 SSLC
Published on

ಚಿತ್ರದುರ್ಗ: ಲಾಕ್‌ಡೌನ್‌ನಿಂದ ಮುಂದೂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ.25ರಿಂದ ಜುಲೈ 3ರ ವರೆಗೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು, ಒಂದೂವರೆ ತಾಸು ಮೊದಲೇ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಬೇಕು.

ಶಿಕ್ಷಣ ಇಲಾಖೆ, ಜಿಲ್ಲಾಡಳಿತ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಸಕಲ ಸಿದ್ಧತೆ ಕೈಗೊಂಡಿದ್ದು, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರಿನಿಂಗ್‌ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆರೋಗ್ಯ ತಪಾಸಣೆಗೆ ಪ್ರತಿ 200 ವಿದ್ಯಾರ್ಥಿಗಳಿಗೆ ಒಂದು ಹೆಲ್ತ್ ಸೆಂಟರ್ ಸ್ಥಾಪಿಸಲಾಗಿದೆ.

ಮೊದಲ ದಿನ ಇಂಗ್ಲಿಷ್ ವಿಷಯದ ಪರೀಕ್ಷೆ ಇದೆ. ಜಿಲ್ಲೆಯ 22615 ಹಾಗೂ ಹೊರ ಜಿಲ್ಲೆಯ 371 ವಿದ್ಯಾರ್ಥಿಗಳು ಜಿಲ್ಲೆಯ 87 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ನಮ್ಮ ಜಿಲ್ಲೆಯ 258 ವಿದ್ಯಾರ್ಥಿಗಳು ಅನ್ಯ ಜಿಲ್ಲೆಗಳ ಕೇಂದ್ರಗಳಿಗೆ ಹಾಜರಾಗಲಿದ್ದಾರೆ. ಕೋವಿಡ್-19 ಸೋಂಕು ತಡೆ ನಿಟ್ಟಿನಲ್ಲಿ ಒಂದು ಕೊಠಡಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ.

ಸಾರಿಗೆ ವ್ಯವಸ್ಥೆಗಾಗಿ ಖಾಸಗಿ ಶಾಲೆಯ 197 ವಾಹನಗಳನ್ನು 215 ಮಾರ್ಗಗಳಲ್ಲಿ ಕಳಿಸಲಾಗುತ್ತಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ. ಅಗತ್ಯವಿರುವೆಡೆ ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧಿಸಲಾಗುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕರು ಮೈಕ್ ಮೂಲಕ ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಿದ್ದಾರೆ.

ಅಂತರ್ ರಾಜ್ಯದಿಂದ 27 ವಿದ್ಯಾರ್ಥಿಗಳು ಗಡಿ ಪ್ರದೇಶದ ಪರೀಕ್ಷಾ ಕೇಂದ್ರಗಳಿಗೆ ಬರಲಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇದೆ ಮತ್ತು ಅವಶ್ಯವಿರುವಂಥ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ನೆರವಾಗಿ ಜಿಲ್ಲಾ (08194-222259) ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ನೋಡಲ್ (ಮೊ.ನಂ: 9945713933) ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ.

ತಾಲೂಕು-ಸಹಾಯವಾಣಿ-ನೋಡೆಲ್ ಅಧಿಕಾರಿ ಮೊ.ಸಂಖ್ಯೆ
ಚಿತ್ರದುರ್ಗ 222236 9620064547
ಚಳ್ಳಕೆರೆ 222296 9886799923
ಹಿರಿಯೂರು 263260 7019451504
ಹೊಸದುರ್ಗ 230225 8762747132
ಹೊಳಲ್ಕೆರೆ 275223 7899460068
ಮೊಳಕಾಲ್ಮೂರು 229242 9036456532

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net