ಬಡ್ತಿ ಪ್ರಕ್ರಿಯೆಗೆ ಚಾಲನೆ

shashikala jolle-1577177241
Published on

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಡಿಡಿ, ಜೆಡಿ ಹಾಗೂ ಸಿಡಿಪಿಒ ಹುದ್ದೆಗಳಿಗೆ ಹಂತ, ಹಂತವಾಗಿ ಬಡ್ತಿ ಪ್ರಕ್ರಿಯೆ ನಡೆಯಲಿದೆ ಎಂದರು.

ಈ ವಾರದೊಳಗೆ 628 ಸೂಪರ್‌ವೈಸರ್ ಹುದ್ದೆಗಳು ಬಡ್ತಿ ಮೂಲಕ ಭರ್ತಿಯಾಗಲಿವೆ. ಅಧಿಕಾರಕ್ಕೆ ಬಂದ 2 ತಿಂಗಳಲ್ಲಿ ಈ ಇಲಾಖೆ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಈಗ ಜಿಲ್ಲಾ ಪ್ರವಾಸವನ್ನು ಆರಂಭಿಸಿದ್ದೇನೆ ಎಂದು ತಿಳಿಸಿದರು.

ಶ್ರೀಮಂತರು ಬಿಪಿಎಲ್ ಕಾರ್ಡ್ ಹೊಂದಿರುವ ಮಾಹಿತಿ ಇದ್ದು, ಜನವರಿ ಅಂತ್ಯದೊಳಗೆ ಕಾರ್ಡ್ ಹಿಂತಿರುಗಿಸಲು ಅವಕಾಶ ಇದೆ. ಒಂದು ವೇಳೆ ಒಪ್ಪಿಸದಿದ್ದಲ್ಲಿ ಕ್ರಮ ಜರುಗಿಸುತ್ತೇವೆ. ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ನಿಟ್ಟಿನಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net