ಪಾಕಿಸ್ತಾನಕ್ಕೆ ಜೈ ಎನ್ನುವರನ್ನು ಗುಂಡಿಟ್ಟು ಕೊಲ್ಲಿ

BC PATIL download
Published on

ಚಿತ್ರದುರ್ಗ: ದೇಶ ವಿರೋಧಿ ಘೋಷಣೆ ಕೂಗಿದವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು. ಈ ಸಂಬಂಧ ಪ್ರಧಾನಿಗೆ ಮನವಿ ಮಾಡುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಚಿತ್ರದುರ್ಗ ಮುರುಘಾ ಮಠಕ್ಕೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ಅನ್ನ, ನೀರು, ಗಾಳಿ ಸೇವಿಸಿ ದೇಶ ವಿರೋಧಿ ಘೋಷಣೆ ಸಲ್ಲದು ಎಂದರು.

ಹತಾಶರಾಗಿ ಸಿದ್ದರಾಮಯ್ಯ ಮಾತನಾಡುತ್ತಿದ್ದು, ನಮ್ಮಿಂದಾಗಿ ಅವರಿಗೆ ವಿಪಕ್ಷ ನಾಯಕ ಸ್ಥಾನ ಸಿಕ್ಕಿದೆ. ನಮ್ಮನ್ನು ಅವರು ನೆನೆಸಿಕೊಳ್ಳಬೇಕು. ಅವರಿಗೆ ನಿಜಕ್ಕೂ ನಮ್ಮ ಬಗ್ಗೆ ಒಳಗೆ ಪ್ರೀತಿ ಇದೆ. ವಿಪಕ್ಷ ನಾಯಕನೆಂಬ ಕಾರಣಕ್ಕೆ ಹೊರಗೆ ಟೀಕೆ ಮಾಡುತ್ತಿದ್ದಾರೆ ಎಂದರು.

ಶಾಸಕ ಕುಮಟಳ್ಳಿ ತ್ಯಾಗ ಮಾಡಿದ್ದಾರೆ. ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕು. ಸಚಿವ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಕುಮಟಳ್ಳಿ ಅವರಿಗೆ ಅನ್ಯಾಯ ಆಗಬಾರದೆಂದು ಸಿಎಂ ಬಿಎಸ್‌ವೈ ಅವರಿಗೆ ಒತ್ತಾಯ ಮಾಡುತ್ತೇನೆ. ಸೋತವರಿಗೆ ಮಂತ್ರಿ ಸ್ಥಾನ ನೀಡಲು ಕಾನೂನು ತೊಡಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net