

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಜ.5ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಸಚಿವರು 10.30 ಕ್ಕೆ ಮುರುಘಾ ಮಠದಲ್ಲಿ ಆಯೋಜಿಸಿರುವ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡುವರು.
1 ಗಂಟೆಗೆ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿ, ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ. ಮಧ್ಯಾಹ್ನ 3.30 ಆಹಾರ ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 6 ಗಂಟೆಗೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.